ಅಭಿಪ್ರಾಯ / ಸಲಹೆಗಳು

ಹುಲಿವೇಷ

ಹುಲಿವೇಷ ಹಾಕುವುದು ಸಾಮಾನ್ಯವಾಗಿ ಕರ್ನಾಟಕದ ತುಂಬೆಲ್ಲ ಕಂಡು ಬರುತ್ತದೆ. ಮೊಹರಂ ಮತ್ತು ಬಾಬಯ್ಯನ ಹಬ್ಬದ ಸಂದರ್ಭದಲ್ಲಿ ಈ ವೇಷ ಹೆಚ್ಚಾಗಿ ಹಾಕುತ್ತಾರೆ. ಉರುಸು, ಜಾತ್ರೆ ಹಬ್ಬಗಳಲ್ಲಿಯೂ ಹುಲಿವೇಷ ಧರಿಸುತ್ತಾರೆ. ಮನರಂಜನೆಗಾಗಿ ಹೊಟ್ಟೆಪಾಡಿಗಾಗಿ ಹುಲಿವೇಷ ಧರಿಸುವ ಕಲಾವಿದರೂ ಇದ್ದಾರೆ. ಬಿಸಿಲು,  ಮಳೆ ಚಳಿಯಲ್ಲಿ ಬರಿಮೈಯಲ್ಲಿ ನಿಂತು ಸಹಿಸಿಕೊಂಡು ಕುಣಿದು ಕುಪ್ಪಳಿಸುವ ಶಕ್ತಿಯುಳ್ಳ ಯಾವ ವರ್ಗದ ವ್ಯಕ್ತಿಯಾದರೂ ಹುಲಿವೇಷ ಹಾಕಬಹುದು.

 

ಹುಲಿವೇಷಗಾರರಿಗೆ ಕೆಂಪು ಮಿಶ್ರಿತ ಹಳದಿ ಬಣ್ಣವನ್ನು ಇಡೀ ದೇಹಕ್ಕೆ ಹಚ್ಚಿರುತ್ತಾರೆ. ವೇಷಗಾರ ಚಡ್ಡಿಯನ್ನು ಮಾತ್ರ ಧರಿಸಿರುತ್ತಾನೆ. ತಲೆಗೆ ಬಿಗಿಯಾಗಿ ಕುಳಿತುಕೊಳ್ಳುವ ಟೊಪ್ಪಿಗೆಯನ್ನು ಧರಿಸಿರುತ್ತಾನೆ. ಟೊಪ್ಪಿಗೆಗೂ ಹಳದಿ ಬಣ್ಣ ಹಚ್ಚಿರುತ್ತಾರೆ. ಟೊಪ್ಪಿಗೆ ರಟ್ಟಿನಿಂದ ಕಿವಿಗಳನ್ನು ಮಾಡಿ ಜೋಡಿಸಿರುತ್ತಾರೆ. ಕೆಲವರು ತಲೆಗೆ ಹುಲಿಯ ಕಿವಿಯಾಕಾರವನ್ನು ಕಟ್ಟಿಕೊಳ್ಳುತ್ತಾರೆ. ಹಳದಿ ಬಣ್ಣದ ಮೇಲೆ ಹಳದಿ ಕಪ್ಪು ಮಿಶ್ರಿತ ಹುಲಿ ಚರ್ಮದ ಮೇಲಿನ ಪಟ್ಟಿಗೆಗಳನ್ನು ಮಾಡಿರುತ್ತಾರೆ. ಅರಿವೆಯಿಂದ ಬಾಲವನ್ನು ಮಾಡಿರುತ್ತಾರೆ. ಕೆಲವರು ರಟ್ಟಿನಿಂದ  ಹುಲಿಯ ಮುಖವಾಡ ಮಾಡಿಸಿ ಮುಖಕ್ಕೆ ಕಟ್ಟಿಕೊಂಡಿರುತ್ತಾರೆ. ಉದ್ದವಾದ ಚೂಪಾದ ಉಗುರುಗಳನ್ನು ಕೈಯ ಬೆರಳುಗುರುಗಳಿಗೆ ಹಾಕಿಕೊಂಡಿರುತ್ತಾರೆ. ಹುಲಿವೇಷಗಾರರು ಒಳ್ಳೆಯ ಕಲಾವಿದನ ಹತ್ತಿರ ಹೋಗಿ ಬಣ್ಣ ಬರೆಯಿಸಿಕೊಂಡು ಬರುತ್ತಾರೆ. ಬಣ್ಣ ಹಾಕಿದ ಮೇಲೆ ವೇಷಗಾರನಿಗೆ ಏನೂ ಆಗಬಾರದೆಂದು ರಟ್ಟೆಗೆ ನಿಂಬೆಹಣ್ಣು, ಕರಿದಾರ ಕಟ್ಟಿರುತ್ತಾರೆ.

 

ಹುಲಿವೇಷ ಧರಿಸಿದವರು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಪ್ರದರ್ಶನ ನೀಡುತ್ತಾರೆ. ಹುಲಿವೇಷಧಾರಿಗೆ ಹೆಜ್ಜೆಗಾರಿಕೆಯ ಪರಿಚಯ ಇರಬೇಕಾಗಿರುತ್ತದೆ. ಇಲ್ಲದೆ ಹೋದರೆ ಹುಲಿ ಕುಣಿತಕ್ಕೆ ಕಳೆ ಬರುವುದಿಲ್ಲ. ಹಲಗೆ ತಮಟೆಯ ವಾದ್ಯಗಳ ಗತ್ತಿಗೆ ತಕ್ಕಂತೆ ಹುಲಿ ವೇಷಧಾರಿ ಕುಣಿಯುತ್ತಾನೆ.  ವಾದ್ಯಗಳ ಬಡಿತ ತೀವ್ರವಾದಂತೆ ಕುಣಿತ ತೀವ್ರವಾಗುತ್ತದೆ.  

ಹುಲಿವೇಷಕ್ಕೆ ಸಂಬಂಧಿಸಿದ ಛಾಯಾಚಿತ್ರಗಳ ಲಿಂಕ್

ಇತ್ತೀಚಿನ ನವೀಕರಣ​ : 11-08-2023 12:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಜಾನಪದ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080